ರಾಜ್ಯ

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದೇವೆ: ಡಿಕೆ ಶಿವಕುಮಾರ್

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದೇವೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಕ್ಕೆ ಅಗೌರವ ತೋರಿದವರ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಬಿಜೆಪಿಯವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದರು.

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, "ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.