ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ
ಬಾಬಾಬುಡನ್ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಬಾಬಾಬುಡನ್ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, 2017ರಲ್ಲಿ ದಾಖಲಾಗಿದ್ದ ಕೇಸ್ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.
ಜನವರಿ 8ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುದ್ದಿಯಾಗಿದೆ ಎಂದು ತಿಳಿಸಿದ್ದಾರೆ.
2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.
ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ವದಂತಿ ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


