ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ್
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.
ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್‌ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ಇಲ್ಲ. ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್ ಕೊಡಬೇಕಾಗುತ್ತೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


