ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ್ದ ಆರೋಪಿ ಬಂಧನ
ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳಗಾವಿ: ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸರ ಪ್ರಕಾರ, ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಬಸುರ್ಟೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸಂತ್ರಸ್ತೆಯ ಮಕ್ಕಳು ಹಿಂದಿನ ದಿನ ಆರೋಪಿಯ ತೋಟದಿಂದ ಹೂವುಗಳನ್ನು ಕಿತ್ತಿದ್ದರು ಎಂಬ ನೆಪದಲ್ಲಿ ಆಕೆಯ ಮೂಗು ಕತ್ತರಿಸಿದ್ದಾನೆ.
ಸಂತ್ರಸ್ತೆಯನ್ನು ಸುಗಂಧಾ ಮೋರೆ (50) ಎಂದು ಗುರುತಿಸಲಾಗಿದ್ದು, ಆರೋಪಿಯು ಆಕೆಯೊಂದಿಗೆ ಜಗಳವಾಡಿ ಆಕೆಯ ಮೂಗು ಕತ್ತರಿಸಿದ್ದಾನೆ. ತೀವ್ರ ರಕ್ತಸ್ರಾವಗೊಂಡಿದ್ದ ಸುಗಂಧಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


