ರಾಜ್ಯ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಜ.15ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಜ.15ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ.

ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಮೀಕ್ಷೆ ನಡೆಸುವಾಗ ನಾಮಪಲಕದಲ್ಲಿ ಕನ್ನಡ ಬಳಕೆ ಮಾಡದಿದ್ದಲ್ಲಿ ಆಯಾ ಉದ್ದಿಮೆಗಳಿಗೆ ತಿಳುವಳಿಕೆ ಪತ್ರ ನೀಡಬೇಕು. ಉದ್ದಿಮೆ ಪರವಾನಗಿ ಇದ್ದರೆ ಯಾಕೇ ನಾವು ಉದ್ದಿಮೆ ಪರವಾನಗಿ ರದ್ದು ಮಾಡಬಾರದು ಎಂದು ನೀಡಬೇಕು. ಒಂದು ವೇಳೆ ಉದ್ದಿಮೆ ಪರವಾನಗಿ ಮಾಡಿಸದ್ದಿದರೆ ಯಾಕೆ ನಾವು ನಿಮ್ಮ ಉದ್ಯಮವನ್ನು ಮುಚ್ಚಬಾರದೆಂದು ತಿಳುವಳಿಕೆ ಪತ್ರವನ್ನು ಜಾರಿಮಾಡಬೇಕೆಂದು ತಿಳಿಸಿದರು.

ಸಭೆಯಲ್ಲಿ ವಲಯ ಆಯುಕ್ತ ಇಬ್ರಾಹಿಂ ಮೈಗುರ್, ಪ್ರೀತಿ ಗೆಹ್ಲೋಟ್, ಎಲ್ಲಾ ವಲಯದ ಜಂಟಿ ಆಯುಕ್ತರು, ಉಪ ಆಯುಕ್ತರು (ಆಡಳಿತ), ಜಾಹೀರಾತು ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.