ಹೋರಾಟಗಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆಗ್ರಹ
ಕನ್ನಡಪರ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಶಿಕ್ಷಣ ತಜ್ಞರು ಒಳಗೊಂಡ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆರೋಪಿಸಿದೆ.

ಬೆಂಗಳೂರು: ಕನ್ನಡಪರ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಶಿಕ್ಷಣ ತಜ್ಞರು ಒಳಗೊಂಡ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆರೋಪಿಸಿದೆ.
ಅಧಿಕಾರಕ್ಕೆ ಬರುವ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಭಟನೆಗಳನ್ನು ಪ್ರಜಾಪ್ರಭುತ್ವದ ಪ್ರಮುಖ ಭಾಗ ಎಂದು ಹೇಳುತ್ತಿದ್ದರು, ಆದರೆ, ಈಗ ಅವರ ಸರ್ಕಾರವೇ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ ಎಂದು ಸಮಿತಿ ಕಿಡಿಕಾರಿದೆ.
ಸಮಿತಿ ಮುಖಂಡರಾಗಿರುವ ಕುರುಬೂರು ಶಾಂತಕುಮಾರ್ ಮಾತನಾಡಿ, ಭಾಷೆ, ನೆಲ, ಜಲಕ್ಕಾಗಿ ಹೋರಾಟ ನಡೆಸುವವರ ಹೋರಾಟವನ್ನು ಹತ್ತಿಕ್ಕುತ್ತಿರುವುದು ಜನವಿರೋಧಿ ಕ್ರಮವಾಗಿದೆ. ಕನ್ನಡ ಬಳಕೆಯ ಅನುಷ್ಠಾನದ ಹೊಣೆ ಹೊತ್ತಿರುವ ಸರ್ಕಾರಿ ಸಂಸ್ಥೆಗಳು ನಿಷ್ಕ್ರಿಯಗೊಂಡಿವೆ. ಆ ಸಂಸ್ಥೆಗಳು ದಕ್ಷತೆಯಿಂದ ಕೆಲಸ ಮಾಡುವುದನ್ನು ಖಾತ್ರಿಪಡಿಸುವ ಬದಲು ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಂಧಿತ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಲು ಹಾಗೂ ಅವರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಲು ಸಿಎಂ ಕೂಡಲೇ ಕ್ರಮಕೈಗೊಳ್ಳಬೇಕು. ಎಲ್ಲ ಸಂಘಗಳ ಮುಖಂಡರ ಸಭೆ ಕರೆದು ಚರ್ಚಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


