ಬೆಳಗಾವಿ: ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ, ಆರೋಪಿ ಬಂಧನ
ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭವತಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭವತಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರಿಂದ, ಮನೆಯಲ್ಲಿ ತಂದೆ ಮತ್ತು ಮಗಳು ಮಾತ್ರ ಇರುತ್ತಿದ್ದರು. ಇಂತಹ ಪರಿಸ್ಥಿತಿಯ ಲಾಭ ಪಡೆದು ಆರೋಪಿ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಗರ್ಭಿಣಿಯಾಗಿರುವ ಬಗ್ಗೆ ಅನುಮಾನಗೊಂಡ ಸ್ಥಳೀಯರು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಗರ್ಭಿಣಿ ಎಂದು ಆಶಾ ಕಾರ್ಯಕರ್ತೆಯರು ಖಚಿತಪಡಿಸಿದಾಗ, ಪೊಲೀಸರಿಗೆ ದೂರು ನೀಡಲಾಗಿದೆ.
ಅನುಮಾನ ಬಂದ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯೇ ತನ್ನ ಮೊಮ್ಮಗನ ತಂದೆ ಎಂಬುದು ದೃಢಪಟ್ಟಿದೆ.
ಎನ್‌ಜಿಒ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ದರಾಮಪ್ಪ ತಿಳಿಸಿದ್ದಾರೆ.
ಆಕೆಯ ತಂದೆಯೇ ಅಪರಾಧಿ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


