ಬೆಂಗಳೂರು: ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯುವಕನ ಯತ್ನ!
ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 07-12 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿದೆ.

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 07-12 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿದೆ.
ನಿಲ್ದಾಣದ ಪ್ಲಾಟ್ ಫಾರ್ಮ್ ನ ಕೊನೆಯಲ್ಲಿ ನಿಂತಿದ್ದ 22 ವರ್ಷದ ಯುವಕ ಬರುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತುಕೊಂಡ ಬಿಎಂಆರ್ ಸಿಎಲ್ ಸಿಬ್ಬಂದಿ ಆತನ್ನು ರಕ್ಷಿಸಿ, ಸಮೀಪದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ವೇಳೆ ನಾಲ್ಕು ರೈಲುಗಳ ಸಂಚಾರವನ್ನು ಅವುಗಳು ಇದ್ದ ನಿಲ್ದಾಣದಲ್ಲಿಯೇ ಸ್ಥಗಿತಗೊಳಿಸಲಾಯಿತು. ಅದರಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು. ಈ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ರೈಲುಗಳು ಸಂಚರಿಸಿವೆ.
ರಾತ್ರಿ 8 .00 ಗಂಟೆಯಿಂದ ಹಸಿರು ಮಾರ್ಗದಲ್ಲಿ ಸಂಪೂರ್ಣವಾಗಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


