ವಿಜಯಪುರ: ಸರ್ಕಾರಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ವೇಗವಾಗಿ ಬಂದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿಯ ರಭಸಕ್ಕೆ ಎರಡೂ ಬಸ್‍ಗಳ ಮುಂಭಾಗ ಭಾರೀ ಪ್ರಮಾಣದಲ್ಲಿ ಜಖಂಗೊಂಡಿದೆ. ಮುಂಭಾಗದಲ್ಲಿದ್ದವರಿಗೆ ತೀವ್ರ ಪೆಟ್ಟಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


