ರಾಜ್ಯ

ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ: ಹರಿಪ್ರಸಾದ್

ಕೋಮು ಗಲಭೆ ನಡೆಸಿ 2024ಕ್ಕೆ "ವಿಶ್ವಗುರುವನ್ನ" ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ.

ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ: ಹರಿಪ್ರಸಾದ್
ಬಿ ಕೆ ಹರಿಪ್ರಸಾದ್
Published On :

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ "ರಾಷ್ಟ್ರ ರಕ್ಷಣಾ ಪಡೆ" ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ಕೋಮು ಗಲಭೆ ನಡೆಸಿ 2024ಕ್ಕೆ "ವಿಶ್ವಗುರುವನ್ನ" ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.