ರಾಜ್ಯ

ಸ್ಕೂಟರ್-ಬಸ್ ಅಪಘಾತ; BMTC ಗೆ ಮತ್ತೊಂದು ಬಲಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪಘಾತಗಳ ಸರಣಿ ಮುಂದುವರೆದಿದ್ದು, BMTC ಬಸ್ ಗೆ ಮತ್ತೊಂದು ಬಲಿಯಾಗಿದೆ.

ಸ್ಕೂಟರ್-ಬಸ್ ಅಪಘಾತ; BMTC ಗೆ ಮತ್ತೊಂದು ಬಲಿ
BMTCಗೆ ಮತ್ತೊಂದು ಬಲಿ
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪಘಾತಗಳ ಸರಣಿ ಮುಂದುವರೆದಿದ್ದು, BMTC ಬಸ್ ಗೆ ಮತ್ತೊಂದು ಬಲಿಯಾಗಿದೆ.

ಹೌದು.. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತ ಸವಾರನನ್ನು 43 ವರ್ಷದ ಎಳಂಗೋವನ್ ಸೆಂಕತ್ತವಲ್ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಜನವರಿ 6ರಂದು ಅಂದರೆ ಶನಿವಾರ ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್‌ ಸವಾರ ತೆರಳುತಿದ್ದ, ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು. ಈ ವೇಳೆ ವೋಲ್ವೋ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಎಚ್‌ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.