ಜಾಗತಿಕ ಮಾರುಕಟ್ಟೆಗೆ ನಂದಿನಿ ಬ್ರಾಂಡ್ ವಿಸ್ತರಣೆ: ಕೆಎಂಎಫ್ ಎಂಡಿ ಎಂಕೆ ಜಗದೀಶ್
ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ...

ಮಣಿಪಾಲ: ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್)ದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಕೆ ಜಗದೀಶ್ ಅವರು ಶನಿವಾರ ಹೇಳಿದ್ದಾರೆ.
ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ(AAPI)ದ ವತಿಯಿಂದ ಮಣಿಪಾಲದ ಫಾರ್ಚೂನ್ ವ್ಯಾಲಿ ವ್ಯೂ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಜಾಗತಿಕ ಆರೋಗ್ಯ ಶೃಂಗಸಭೆಯ ಎರಡನೇ ದಿನ ನಡೆದ ಸಿಇಒ ಫೋರಂನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ನೂರಾರು ವೈದ್ಯರ ಸಮಾಗಮದೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತಾದ ವಿಚಾರ ಸಂಕಿರಣದ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಜೊತೆಗೆ ಕೈಗೆಟಕುವ ಬೆಲೆಯಲ್ಲಿ ಗ್ರಾಹಕರಿಗೆ ನೀಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಈ ಹೆಲ್ತ್ ಸಮ್ಮಿಟ್‌ನ ವೇದಿಕೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಬ್ರಾಂಡ್ ಅನ್ನು ವಿಸ್ತರಿಸುವ ಆಶಯವನ್ನು ಕೆಎಂಎಫ್ ಹೊಂದಿದೆ. ಕೆಎಂಎಫ್ ಸಂಸ್ಥೆಯು ನಂದಿನಿ ಹೆಸರಿನಡಿ ಹಲವು ಉತ್ಪನ್ನಗಳನ್ನು ಪರಿಚಯಿಸಿದ್ದು, ಕರ್ನಾಟಕದಾದ್ಯಂತ ಪ್ರತಿನಿತ್ಯ 45 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಮಂಡಳಿಯು ಶೇ. 84ರಷ್ಟು ಲಾಭವನ್ನು ನೇರವಾಗಿ ರೈತರಿಗೆ ನೀಡುತ್ತಿದೆ ಎಂದು ಹೇಳಿದರು.
ಫಾರ್ಮಸಿಟಿಕಲ್ಸ್ ಮತ್ತು ಹೆಲ್ತ್‌ಕೇರ್ ನಲ್ಲಿ ಜೈಡಸ್ ಸಂಸ್ಥೆಯು ಅಮೆರಿಕದ ಅಗ್ರ 5 ಸಂಸ್ಥೆಗಳಲ್ಲಿ ಒಂದಾಗಿದೆ. ಕೋವಿಡ್-19ಗೆ ಚುಚ್ಚುಮದ್ದು ರಹಿತ ಲಸಿಕೆಯನ್ನು ಜಾಗತಿಕವಾಗಿ ಪರಿಚಯಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ಜೈಡಸ್‌ಗೆ ಸಲ್ಲುತ್ತದೆ ಎಂದು ಜೈಡಸ್ ಲೈಫ್‌ಸೈನ್ಸಸ್ ಲಿಮಿಡೆಟ್‌ನ ವ್ಯವಸ್ಥಾಪಕ ನಿರ್ದೇಶಕರಾದ ಗಣೇಶ್ ನಾಯಕ್ ತಿಳಿಸಿದರು.
ವೇದಿಕೆಯಲ್ಲಿದ್ದ ಇತರೆ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು, ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ಸಂಸ್ಥೆಗಳು ನೀಡುತ್ತಿರುವ ಕೊಡುಗೆಗಳನ್ನು ಸಭೆಯಲ್ಲಿ ಸೇರಿದ ವೈದ್ಯಕೀಯ ಸಮೂಹದೊಂದಿಗೆ ಹಂಚಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


