ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!
ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

ತುಮಕೂರು: ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.
ತುಮಕೂರಿನ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ತಿಪಟೂರು ಮೂಲದ 21 ವರ್ಷದ ನರಸಿಂಹ ಮೂರ್ತಿ, 21 ವರ್ಷದ ಅನಿಲ್ ಕುಮಾರ್ ಮತ್ತು 19 ವರ್ಷದ ಕಾವ್ಯ ಎಂದು ಗುರುತಿಸಲಾಗಿದೆ.
ಆದಿಚುಂಚನಗಿರಿ ಮಠಕ್ಕೆ ಸ್ಕೂಟರ್‌ನಲ್ಲಿ ತೆರಳಿದ್ದ ಮೂವರು ಸ್ನೇಹಿತರು ವಾಪಸ್ಸಾಗುತ್ತಿದ್ದಾಗ ಜೋಡಗಟ್ಟೆ ಬಳಿ ಸ್ಕೂಟರ್-ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಅಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


