ಅತಿಥಿ ಉಪನ್ಯಾಸಕರಿಗೆ 8ಸಾವಿರ ರು. ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ: ತಿಂಗಳಿಂದ ನಡೆಯುತ್ತಿದ್ದ ಮುಷ್ಕರ ವಾಪಸ್
ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದು, ಸೋಮವಾರದಿಂದ ತರಗತಿಗಳಿಗೆ ಮರಳುವ ಸಾಧ್ಯತೆಯಿದೆ. ಕಾನೂನಾತ್ಮಕ ತೊಡಕುಗಳಿಂದಾಗಿ ಸೇವೆಗಳನ್ನು ಕಾಯಂಗೊಳಿಸುವುದನ್ನು ಹೊರತುಪಡಿಸಿ, ಮಾನವೀಯ ಆಧಾರದ ಮೇಲೆ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಂಗಳೂರು : ಗೌರವಧನವನ್ನು5 ರಿಂದ 8 ಸಾವಿರ ರೂ.ಗೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ, ಜೊತೆಗೆ ವೇತನ ಸಹಿತ ಹೆರಿಗೆ ರಜೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಮೂರು ತಿಂಗಳವರೆಗೆ ವಿಸ್ತರಿಸಲಪ ಸಮ್ಮತಿ ನೀಡಲಾಗಿದೆ.
ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದು, ಸೋಮವಾರದಿಂದ ತರಗತಿಗಳಿಗೆ ಮರಳುವ ಸಾಧ್ಯತೆಯಿದೆ. ಕಾನೂನಾತ್ಮಕ ತೊಡಕುಗಳಿಂದಾಗಿ ಸೇವೆಗಳನ್ನು ಕಾಯಂಗೊಳಿಸುವುದನ್ನು ಹೊರತುಪಡಿಸಿ, ಮಾನವೀಯ ಆಧಾರದ ಮೇಲೆ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಐದು ವರ್ಷಕ್ಕಿಂತ ಕಡಿಮೆ ಕೆಲಸದ ಅನುಭವ ಹೊಂದಿರುವ ಉಪನ್ಯಾಸಕರಿಗೆ 5,000 ರೂ., 5-10 ವರ್ಷಗಳ ಅನುಭವ ಹೊಂದಿರುವವರಿಗೆ 6,000 ರೂ. 10-15 ವರ್ಷ ಸೇವೆ ಸಲ್ಲಿಸಿದವರಿಗೆ 7 ಸಾವಿರ ಹಾಗೂ 15 ವರ್ಷ ಮೇಲ್ಪಟ್ಟವರಿಗೆ 8 ಸಾವಿರ ರೂ. ಏರಿಕೆಯಾಗಲಿದೆ ಎಂದರು.
ಇದಲ್ಲದೆ, ಅವರು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಪಡೆಯುತ್ತಾರೆ ಮತ್ತು 60 ವರ್ಷಗಳ ನಂತರ 5 ಲಕ್ಷ ರೂಪಾಯಿಗಳ ಗ್ರಾಚ್ಯುಟಿಯನ್ನು ಪಡೆಯುತ್ತಾರೆ. ವಾರಕ್ಕೆ 15 ಗಂಟೆಗಿಂತ ಹೆಚ್ಚಿನ ಕೆಲಸದ ಹೊರೆ ಇರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ, ಮೂರು ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಲು ಸಿಎಂ ಒಪ್ಪಿಗೆ ಸೂಚಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, 5,000 ರೂ.ಗಳ ವೇತನ ಹೆಚ್ಚಳ ಸೇರಿದಂತೆ ಕೆಲವು ಸೌಲಭ್ಯಗಳನ್ನು ಘೋಷಿಸಿದ್ದರು. ಆದರೆ ಅದಕ್ಕೆ ಒಪ್ಪದ ಅತಿಥಿ ಉಪನ್ಯಾಸಕರು ಜನವರಿ 1ರಂದು ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಿಸಿ, ಜನವರಿ 4ರಂದು ಫ್ರೀಡಂ ಪಾರ್ಕ್‌ನಲ್ಲಿ ರ್ಯಾಲಿ ನಡೆಸಿದರು.
ಈ ನಡುವೆ ಶುಕ್ರವಾರ ಮಾಜಿ ಎಂಎಲ್‌ಸಿ ಪುಟ್ಟಣ್ಣ ಅವರನ್ನು ಭೇಟಿ ಮಾಡಿ ಸಿಎಂ ಜತೆ ಸಭೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳಲ್ಲದೆ, ಸುಧಾಕರ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್.ಶ್ರೀಕರ್, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


