ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ: 44 ಮಹಿಳೆಯರ ರಕ್ಷಣೆ, 34 ಮಂದಿ ಸಿಸಿಬಿ ವಶಕ್ಕೆ
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹುಮಹಡಿಯ ಕಟ್ಟಡವೊಂದರ 1 ಮತ್ತು 6ನೇ ಅಂತಸ್ತಿನಲ್ಲಿ ಅನಿಲ್ ಎಂಬಾತ ನಿರ್ವಾಣ ಇಂಟರ್ ನ್ಯಾಷನಲ್ ಸ್ಪಾ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದ. ಈ ಸ್ಪಾದಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ ಯುವತಿಯರು, ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು.
ಇದರಂತೆ ಶನಿವಾರ ತಡರಾತ್ರಿ ಸಿಸಿಬಿ ಪೊಲೀಸರು ಸ್ಪಾ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದಾಗ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ.
ದಾಳಿ ವೇಳೆ 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅಂತೆಯೇ ಸ್ಪಾ ಮಾಲೀಕ ಅನಿಲ್ ಸೇರಿ 34 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಗಳು ಉದ್ಯೋಗ, ಹೆಚ್ಚಿನ ದುಡ್ಡಿನ ಆಸೆ ತೋರಿಸಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ಬಳಿಕ ಒತ್ತಾಯಪೂರ್ವಕವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂಬುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


