ಮತ್ತೊಮ್ಮೆ ಕರಸೇವಕನಾಗಲು ಸಂತೋಷವಾಗುತ್ತಿದೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ರಾಮನಗರಿಯಿಂದ ತಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಣೆ ಅಭಿಯಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಶಾಸಕ ಗೋಪಾಲಯ್ಯ ಭಾಗವಹಿಸಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡಾಲರ್ಸ್ ಕಾಲೊನಿಯ ಮನೆಮನೆಗಳಿಗೆ ಅಯೋಧ್ಯೆಯಿಂದ ತಂದ ಪವಿತ್ರ ಮಂತ್ರಾಕ್ಷತೆ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಜನರಿಗೆ ರಾಮಮಂದಿರ ಮಂತ್ರಾಕ್ಷತೆ ಅರ್ಪಿಸಿದಾಗ ಕರಸೇವಕನಾಗಿದ್ದ ನನ್ನ ಹಳೆಯ ದಿನಗಳು ನೆನಪಾಯಿತು. ಇದೀಗ ಮತ್ತೊಮ್ಮೆ ಕರಸೇವಕನಾಗಿದ್ದು ಸಂತಸ ತಂದಿದೆ ಎಂದು ಹೇಳಿದರು.
ರಾಮರಾಜ್ಯದ ವೈಭವವನ್ನು ಮರಳಿ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲು ನನಗೆ ಯಾವುದೇ ಸಂಕೋಚವಿಲ್ಲ ಎಂದು ಇದೇ ವೇಳೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


