ಮೈಸೂರು: ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರತಲೆ ಗ್ರಾಮದ ಎಚ್.ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಪರಮೇಶ್ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ನಾಡ ಕಛೇರಿಗೆ ತೆರಳಿ ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಿಂದ ಸಂಬಳ ಆಗದೆ ಇರುವುದು ಅತ್ಯಂತ ಬೇಸರವಾಗಿ ಜೀವನ ನಡೆಸುವುದು ಒಂದು ಸಮಸ್ಯೆಯಾಗಿದೆ. ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ಎನ್.ಪಿ ಶಿವಕುಮಾರ್ ಅವರು ನನಗೆ ಮಾನಸಿಕ ಹಿಂಸೆ ಹಾಗೂ ಕೆಲವು ಅವರ ವೈಯಕ್ತಿಕ ದ್ವೇಷದಿಂದ ಮನನೊಂದು ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ.
ನಾನು ಒಬ್ಬ ಅಂಗವಿಕಲ ಎಂದು ಗೊತ್ತಿದ್ದರೂ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಾ ನನಗೆ ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ್ದಾರೆ. ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಶೀಲ್ದಾರ್ ಎನ್.ಪಿ ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಸ್ಥಳಾಂತರ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


