ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: 30ಕ್ಕೂ ಹೆಚ್ಚು ಕಡೆ ಪರಿಶೀಲನೆ; ಕಂತೆ ಕಂತೆ ನೋಟು, ಚಿನ್ನಾಭರಣ ಪತ್ತೆ
ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ನೋಟು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ನೋಟು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮುಖ್ಯ ಜನರಲ್ ಮ್ಯಾನೇಜರ್ ಎಂ ಎಲ್ ನಾಗರಾಜ್ ಅವರ ಆಸ್ತಿಗಳ ಶೋಧ ಕಾರ್ಯಾಚರಣೆಯು ನಡೆಯುತ್ತಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಇದಲ್ಲದೆ ಬೆಂಗಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಡಿಎಂ ಪದ್ಮನಾಭ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.
ಬೆಸ್ಕಾಂ ಮುಖ್ಯ ಜನರಲ್ ಮ್ಯಾನೇಜರ್ ಎಂಎಲ್ ನಾಗರಾಜು ವಿರುದ್ಧ ದಾಖಲಾದ ಅಕ್ರಮ ಆಸ್ತಿ ಪ್ರಕರಣದ ಆಧಾರದ ಮೇಲೆ ಕೂಡ್ಲಿಗಿ, ಬಳ್ಳಾರಿಯ ಐದು ಸ್ಥಳಗಳಲ್ಲಿ ಮತ್ತು ಬೆಂಗಳೂರು ನಗರದ ಎರಡು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಒಂಬತ್ತು ನಿವೇಶನ, ಮೂರು ಮನೆ, ಎರಡು ಪೆಟ್ರೋಲ್ ಬಂಕ್, ಶಿಕ್ಷಣ ಸಂಸ್ಥೆಗಳು ಹಾಗೂ ನಾಲ್ಕು ಕಡೆ ಕೃಷಿ ಭೂಮಿ ಹೊಂದಿರುವುದು ಪತ್ತೆಯಾಗಿದೆ," ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಂಜೇಗೌಡ ನಿವಾಸದಲ್ಲಿ ಮುಂದುವರಿದ ಶೋಧ ಕಾರ್ಯ
ಈ ನಡುವೆ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯ ನಂಜೇಗೌಡ ನಿವಾಸ, ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಚಿಮುಲ್ ಕೇಂದ್ರ ಕಚೇರಿಯಲ್ಲಿ ಶೋಧ ನಡೆಯುತ್ತಿದೆ. ನಿನ್ನೆಯಿಂದ ಶಾಸಕ ನಂಜೇಗೌಡ ಹಾಗು ಕುಟುಂಬಸ್ಥರನ್ನ ಹೊರಗೆ ಕಳುಹಿಸದೇ ಮನೆಯಲ್ಲಿರೋ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


