ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವವರ ವಿರುದ್ದ ಕ್ರಮ: ಸಚಿವ ಎನ್ ಎಸ್ ಭೋಸರಾಜು
ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದ್ದಾರೆ.

ಬೆಂಗಳೂರು: ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದ್ದಾರೆ.
ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳನ್ನ ಎತ್ತಲಾಗುತ್ತಿದೆ. ಇದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ. ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನ ಎತ್ತುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ ಜಾಸ್ತಿ ಮತ್ತು ಅವೈಜ್ಞಾನಿಕವಾಗಿ ಹೂಳನ್ನ ಎತ್ತುತ್ತಿರುವುದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತಿದೆ. ಅಲ್ಲದೇ, ಈ ರೀತಿ ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವುದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಯಾಗುತ್ತಿದೆ. ಅಲ್ಲದೇ, ಅಂತರ್ಜಲ ಮಟ್ಟವೂ ಗಣನೀಯವಾಗಿ ಕ್ಷೀಣಿಸುತ್ತಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂತಹ ಚಟುವಟಿಕೆಗಳ ವಿರುದ್ದ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲಾ ವೃತ್ತಗಳ ಅಧೀಕ್ಷಕ ಅಭಿಯಂತರರುಗಳಿಗೆ ಹಾಗೂ ಎಲ್ಲಾ ವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳಿಗೆ ಕಟ್ಟುನಿಟ್ಟಾದ ನಿರ್ದೇಶನ ನೀಡುವಂತೆ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


