ರಾಜ್ಯ

ಬಿಎಂಆರ್ ಸಿಎಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ್ ರಾವ್ ಎಂ. ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಬಿಎಂಆರ್ ಸಿಎಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ
ಮಹೇಶ್ವರ್ ರಾವ್ ಎಂ
Published On :

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಎಂ. ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. 

ಇತ್ತೀಚಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸುದ್ದಿಗೋಷ್ಠಿ ನಡೆಸಿ, ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಬಿಎಂಆರ್​ಸಿಎಲ್​ ನೂತನ ಎಂಡಿ ಆಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಅವರು, ಕೊನೆಗೂ ನಮ್ಮ ಮೆಟ್ರೋಗೆ ಪೂರ್ಣ ಪ್ರಮಾಣದ ಎಂಡಿಯನ್ನು ಪಡೆಯಲಾಗಿದೆ. ನಗರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು  ತ್ವರಿತವಾಗಿ ಎಂಡಿ ನೇಮಕ ಮಾಡಿದಕ್ಕಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.