ಹಾನಗಲ್'ನಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ, ಇಬ್ಬರ ಬಂಧನ
ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯ ಕೋಮಿನ ಮಹಿಳೆಯೊಂದಿಗೆ ಲಾಡ್ಜ್ಗೆ ಬಂದಿದ್ದ ಯುವಕನಿಗೆ 12 ಮಂದಿಯಿಂದ ತಂಡವೊಂದು ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಹಾವೇರಿ: ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯ ಕೋಮಿನ ಮಹಿಳೆಯೊಂದಿಗೆ ಲಾಡ್ಜ್ಗೆ ಬಂದಿದ್ದ ಯುವಕನಿಗೆ 12 ಮಂದಿಯಿಂದ ತಂಡವೊಂದು ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜ.7ರಂದು ಹಾನಗಲ್ ಸಮೀಪದ ನಾಲ್ಕರ ಕ್ರಾಸ್ ಬಳಿಯ ಲಾಡ್ಜ್ಗೆ ಶಿರಸಿ ಮೂಲದವರೆನ್ನಲಾದ ಅನ್ಯ ಕೋಮಿನ ಯುವತಿಯೊಂದಿಗೆ ಯುವಕನೋರ್ವ ಆಗಮಿಸಿರುವ ಮಾಹಿತಿ ಪಡೆದ ಯುವಕರ ಗುಂಪು ಲಾಡ್ಜ್ಗೆ ನುಗ್ಗಿ ಯುವಕ-ಯುವತಿಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ನಂತರ ಯುವತಿಯನ್ನು ಅಜ್ಞಾತ ಸ್ಥಳವೊಂದಕ್ಕೆ ಕೊಂಡೊಯ್ದ ಯುವಕರು, ಮಾನಸಿಕ ಕಿರುಕುಳ ಸೇರಿದಂತೆ ದೈಹಿಕ ಹಲ್ಲೆ ನಡೆಸಿರುವುದಾಗಿ ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಈ ಸಂಬಂಧ ಯುವತಿಯ ಕುಟುಂಬಸ್ಥಲು ಹಾನಗಲ್ ಪೊಲೀಸರಿಗೆ ದೂರು ನೀಡಿದ್ದು, ದೂರು ಅನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


