ದೆಹಲಿ ಪ್ರವಾಸ ಬಳಿಕ ವಿದೇಶಕ್ಕೆ ಹಾರಿದ ಸಚಿವ ಸತೀಶ್ ಜಾರಕಿಹೊಳಿ
ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಳಗಾವಿ: ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
‘ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಂಬಂಧವಾಗಿ ದೆಹಲಿಯಲ್ಲಿ ಹೈಕಮಾಂಡ್ ಜೊತೆಗೆ ಸಾಕಷ್ಟು ಚರ್ಚೆ ನಡೆದಿದ್ದವು. ಈ ಸಂಬಂಧ ಹೈಕಮಾಂಡ್ ಹಲವು ಸೂಚನೆಗಳನ್ನು ನೀಡಿದ್ದು, ಇದರಿಂದ ಬೇಸರಗೊಂಡು ವಿದೇಶಕ್ಕೆ ಹೋಗಿರಬಹುದು ಹೇಳಲಾಗುತ್ತಿದೆ.
ನಿನ್ನೆಯಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದ್ದು, ಸಭೆಗೆ ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣದ ಪಾರ್ಲಿಮೆಂಟ್ ಸಮನ್ವಯಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆದಿತ್ತು. ರಾಜ್ಯದಿಂದ ಸಚಿವರು ಹಾಗೂ ಕೆಲವು ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಈ ನಿಟ್ಟಿನಲ್ಲಿ ನಿಮ್ಮಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಗಂಭೀರವಾಗಿ ಎದುರಿಸಿ. ಒಂದು ವೇಳೆ ಚುನಾವಣೆಯಲ್ಲಿ ಸೋತಿದ್ದೇ ಆದರೆ, ಸಂಬಂಧಪಟ್ಟ ಸಚಿವರ ತಲೆದಂಡ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


