ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಸಂಚರಿಸುತ್ತಿದ್ದ ಕಾರು ಪಲ್ಟಿ; ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಭಾನುವಾರ ಕಲಬುರಗಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಲಬುರಗಿ: ಭಾನುವಾರ ಇಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಲಬುರಗಿ ಗ್ರಾಮಾಂತರ ಶಾಸಕ ಮತ್ತಿಮಡು ಅವರ ಕಾರು ಪಾಳಾ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.
ಶಾಸಕರು ಇತರ ಕೆಲವು ಮುಖಂಡರೊಂದಿಗೆ ಶಹಾಬಾದ್ ಕಡೆಗೆ ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಶಾಸಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮತ್ತಿಮಡು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


