ರಾಮದೇವರ ಬೆಟ್ಟದ ರಾಮಮಂದಿರ ಅಭಿವೃದ್ಧಿಗೆ ಸಂಸದ ಡಿಕೆ ಸುರೇಶ್ ಪತ್ರ
ರಾಮನಗರದ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರವನ್ನು ಅಭಿವೃದ್ಧಿ ಪಡಿಸುವಂತೆ ಕಾಂಗ್ರೆಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ನ್ಯಾಯವ್ಯಾಪ್ತಿಯ ಕಂದಾಯ ಉಪ ಆಯುಕ್ತರು ಮತ್ತು ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ರಾಮನಗರದ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರವನ್ನು ಅಭಿವೃದ್ಧಿ ಪಡಿಸುವಂತೆ ಕಾಂಗ್ರೆಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ನ್ಯಾಯವ್ಯಾಪ್ತಿಯ ಕಂದಾಯ ಉಪ ಆಯುಕ್ತರು ಮತ್ತು ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಧಿಕೃತ ಅನುಮತಿ ಪಡೆಯುವುದಾಗಿ ತಿಳಿಸಿದರು. ಮೊದಲು ರಾಮನಗರ ತಾಲೂಕಿನಲ್ಲಿರುವ ರಾಮ ಮಂದಿರವನ್ನು ಅಭಿವೃದ್ಧಿ ಪಡಿಸಿ, ಬಳಿಕ ಕನಕಪುರದಲ್ಲಿ ರಾಮಮಂದಿರವನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಕಳೆದ ವರ್ಷ ಮಾರ್ಚ್‌ನಲ್ಲಿ ರಾಮನಗರದ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಇದೇ ರೀತಿ ರಾಮನಗರದ 19 ಎಕರೆ ಜಾಗದಲ್ಲಿ 120 ಕೋಟಿ ರೂ.ವೆಚ್ಚದಲ್ಲಿ ರಾಮಮಂದಿರವನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಸರ್ಕಾರ ಪತನಗೊಂಡಿದ್ದರಿಂದ ಅದು ಸಾಕಾರಗೊಳ್ಳಲಿಲ್ಲ.
ಈ ಹಿಂದೆ ರಾಮನಗರದ ಹೊರವಲಯದಲ್ಲಿರುವ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಚಿವ ಸಂಪುಟದಲ್ಲಿ ಈಗಾಗಲೇ ಚರ್ಚೆ ಮಾಡಲಾಗಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


