ರಾಜ್ಯ

ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ರಾಜ್ಯದೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆ ಮಾಡಿರುವಾಗಲೇ ತುಮಕೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ
ತುಮಕೂರಿನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸಾವು
Published On :

ತುಮಕೂರು: ರಾಜ್ಯದೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆ ಮಾಡಿರುವಾಗಲೇ ತುಮಕೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. 

ಶಿರಾ ಸಮೀಪದ ಕುಂಟೇಗೌಡನಹಳ್ಳಿ ಗೇಟ್ ಬಳಿ ಮುಂಜಾನೆ ಕಾರಿಗೆ ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40), ಉಮೇಶ್(40) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ತುಮಕೂರು ಕಡೆಯಿಂದ ಶಿರಾಗೆ ಹೋಗುತ್ತಿದ್ದಾಗ ಕಾರಿನ ಟೈರ್ ಪಂಚರ್ ಆಗಿದೆ. ಈ ವೇಳೆ ಕಾರಿನಿಂದ ಇಳಿದು ರಸ್ತೆಯಲ್ಲೇ ಪಂಚರ್ ಹಾಕುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.