ಬೆಂಗಳೂರು: ಬೆಂಕಿ ತಗುಲಿ 4 ಬೈಕ್ ಗಳು ಸುಟ್ಟು ಕರಕಲು, ಸಿಲಿಂಡರ್ ಸ್ಫೋಟಕ್ಕೆ 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಸಿಲಿಂಡರ್ ಸ್ಫೋಟ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು: ಸಿಲಿಂಡರ್ ಸ್ಫೋಟ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೆಟ್ರೊ ನಿಲ್ದಾಣ ಬಳಿ ಅಗ್ನಿ ಅವಘಡ, 4 ಬೈಕ್ ಗಳು ಸುಟ್ಟು ಕರಕಲು: ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿ ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


