ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ನೆಲಮಂಗಲ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.
ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬ ಸಂಕ್ರಾಂತಿ ಹಬ್ಬ ಆಚರಿಸಲು ಸ್ವಗ್ರಾಮಕ್ಕೆ ಹೋಗಿ ಮರಳುತ್ತಿದ್ದರು. ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


