ಬೆಂಗಳೂರು: ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ
ಅಪರಿಚಿತ ದುಷ್ಕರ್ಮಿಗಳು ಕೊಲೆ ಆರೋಪಿಯ ಮನೆಗೆ ಬೆಂಕಿ ಹಚ್ಚಿರುವ ಆತಂಕಕಾರಿ ಘಟನೆ ಕನಕಪುರ ರಸ್ತೆಯ ಗೊಲ್ಲಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳು ಕೊಲೆ ಆರೋಪಿಯ ಮನೆಗೆ ಬೆಂಕಿ ಹಚ್ಚಿರುವ ಆತಂಕಕಾರಿ ಘಟನೆ ಕನಕಪುರ ರಸ್ತೆಯ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯ ಕುಟುಂಬ ಮತ್ತು ಸಂಬಂಧಿಕರಿಂದ ಪ್ರತೀಕಾರದ ನಿರೀಕ್ಷೆಯಲ್ಲಿ ಆರೋಪಿಯ ಮನೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.
ಗೊಲ್ಲಹಳ್ಳಿಯ ಎಂ.ರವೀಶ (38) ಎಂಬಾತನನ್ನು ಗೊಲ್ಲಹಳ್ಳಿಯ ಅವರ 40 ವರ್ಷದ ಸೋದರಸಂಬಂಧಿ ಎನ್.ರವಿಕುಮಾರ್ ಅಲಿಯಾಸ್ ‘ಮಸಾಜ್’ ರವಿ ಬುಧವಾರ ಕೊಲೆ ಮಾಡಿದ್ದ. ರವೀಶ ಕುಡಿದ ಅಮಲಿನಲ್ಲಿ ರವಿಯ ತಾಯಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಕುಪಿತಗೊಂಡ ರವಿ ರವೀಶನಿಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ರವೀಶನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ರವೀಶ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಕುಟುಂಬಸ್ಥರು ಪಣ ತೊಟ್ಟಿದ್ದರು.
ರವಿಯನ್ನು ಕೋಡಿಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರವಿ ಅವರ ಮನೆಗೆ ಗುರುವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೊಲೆ ಆರೋಪಿಯ ಮನೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಯ ಭಾಗವಾಗಿದ್ದ ಅಧಿಕಾರಿಯೊಬ್ಬರು ಶುಕ್ರವಾರ ಕೋಡಿಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.
ಏಳು ಪೊಲೀಸ್ ಸಿಬ್ಬಂದಿ ಮನೆಗೆ ಕಾವಲು ಕಾಯುತ್ತಿದ್ದರು. ಹಿಂಬದಿಯಿಂದ ಮನೆಯ ಕಾಂಪೌಂಡ್‌ಗೆ ನುಗ್ಗಿದ ದುಷ್ಕರ್ಮಿಗಳು ಬಿದಿರಿನಿಂದ ತಯಾರಿಸಿದ ರೇಷ್ಮೆ ಹುಳು ಸಾಕಣೆ ತಟ್ಟೆಗಳಿಗೆ ಬೆಂಕಿ ಹಚ್ಚಿದ್ದಾರೆ. ನಂತರ ಬೆಂಕಿ ಮನೆಗೆ ವ್ಯಾಪಿಸಿದೆ.
ಬೆಂಕಿ ನಂದಿಸಲು ಪೊಲೀಸ್ ಸಿಬ್ಬಂದಿಗೆ ಸ್ಥಳೀಯರ ಸಹಾಯ ಸಿಗಲಿಲ್ಲ. ಕೊಲೆ ಪ್ರಕರಣ ಮತ್ತು ಬೆಂಕಿಯ ಹಚ್ಚಿರುವ ಘಟನೆಗೆ ಸಂಬಂಧವಿದೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಸುಮಾರು 2 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


