ಹಿಂದೂ ಬಾಲಕಿಯೊಂದಿಗೆ ಮುಸ್ಲಿಂ ಯುವಕ ಪರಾರಿ; 'ಲವ್ ಜಿಹಾದ್' ಆರೋಪ!
ಮುಸ್ಲಿಂ ಹುಡುಗ ಹಾಗೂ 15 ವರ್ಷದ ಹಿಂದೂ ಯುವತಿ ಪರಾರಿಯಾಗಿದ್ದ ಪ್ರಕರಣ ಕೋಮು ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದನ್ನು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ.

ಮಂಡ್ಯ: ಮುಸ್ಲಿಂ ಹುಡುಗ ಹಾಗೂ 15 ವರ್ಷದ ಹಿಂದೂ ಯುವತಿ ಪರಾರಿಯಾಗಿದ್ದ ಪ್ರಕರಣ ಕೋಮು ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದನ್ನು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ.
ಘಟನೆ ಕೆಆರ್ ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ 19 ವರ್ಷದ ಸೈಯದ್ ತಬ್ರೇಜ್ ಜನವರಿ 12 ರಂದು ಹಿಂದೂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದ. ಇಬ್ಬರೂ ಕೆಆರ್ ಪೇಟೆಯ ನಿವಾಸಿಗಳು.
ಮುಸ್ಲಿಂ ಹುಡುಗನ ವಿರುದ್ಧ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನು ಪತ್ತೆಹಚ್ಚಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಕೆಆರ್ ಪೇಟೆಯಲ್ಲಿ ಹಿಂದೂ ಹುಡುಗಿಯರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ. ಇತರ ಸಮುದಾಯದವರು ಲವ್ ಜಿಹಾದ್ ಮಾಡಲು ಯುವಕರನ್ನು ಪ್ರೇರೇಪಿಸುತ್ತಿದ್ದಾರೆ. ಈ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಹಿಂದೂ ಕಾರ್ಯಕರ್ತರು ಒತ್ತಾಯಿಸಿದರು.
ಪೊಲೀಸರು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


