ರಾಜ್ಯ

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!

ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.

65 ವರ್ಷದ ಈರಮ್ಮ ಎಂಬ ಮಹಿಳೆ ತನ್ನ ಮಗಳೊಂದಿಗೆ ಖಾಸಗಿ ಬಸ್‌ನಲ್ಲಿ ಸುರತ್ಕಲ್‌ಗೆ ತೆರಳುತ್ತಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್‌ಗೆ ಬಸ್ ತಲುಪಿದಾಗ, ಬಸ್‌ನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಚಾಲಕನ ಪಕ್ಕದಲ್ಲಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ.

ಬಸ್ಸಿನ ಹಿಂಬದಿಯ ಚಕ್ರ ಈರಮ್ಮ ಅವರ ಮೇಲೆ ಹರಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ಸಂಚಾರ ಪೊಲೀಸರು ಬಸ್ ಚಾಲಕ ಅನಿಲ್ ಜಾನ್ ಲೋಬೋ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.