ತುಮಕೂರು: ಸೈಬರ್ ಸುರಕ್ಷತೆ ಅಭಿಯಾನದಲ್ಲಿ 44 ಸರ್ಕಾರಿ ಶಾಲೆಗಳು ಭಾಗಿ!
ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.

ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.
ಬೆಂಗಳೂರು ಮೂಲದ ಇಂಟರ್‌ನ್ಯಾಶನಲ್ ಸ್ಕೂಲ್ ಆಫ್ ಬ್ಯುಸಿನೆಸ್ & ರಿಸರ್ಚ್‌ನ 350 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು LetsTagOn ಫೌಂಡೇಶನ್ ಮತ್ತು ಇಂಡಿಯಾ ಲಿಟರಸಿ ಪ್ರಾಜೆಕ್ಟ್‌ನ ಸಹಯೋಗದೊಂದಿಗೆ ಈ ಅಭಿಯಾನ ಕೈಗೊಂಡಿದ್ದಾರೆ. ಇದಕ್ಕೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಾ ಬೆಂಬಲ ವ್ಯಕ್ತಪಡಿಸಿದೆ.
8, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಚಟುವಟಿಕೆ ಆಧಾರಿತ ಅವಧಿಗಳ ಮೂಲಕ ಶಿಕ್ಷಣ ನೀಡುವ ಗುರಿಯನ್ನು ಅಭಿಯಾನ ಹೊಂದಿದೆ. ಉಪನ್ಯಾಸಗಳು, ವೈಯಕ್ತಿಕ ಸುರಕ್ಷತೆ ಮತ್ತು ಸುರಕ್ಷತಾ ಅಪಾಯಗಳಿಗೆ ಸಂಭವನೀಯ ಬೆದರಿಕೆಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳನ್ನು ತಡೆ ಮತ್ತು ಎದುರಿಸುವ ಕ್ರಮಗಳನ್ನು ಒಳಗೊಂಡಿರುತ್ತದೆ.
ಆಯೋಜಕರ ಪ್ರಕಾರ, ಈ ಕಾರ್ಯಕ್ರಮ 30,000 ಕ್ಕೂ ಹೆಚ್ಚು ಜನರ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಏಕೆಂದರೆ ಮಕ್ಕಳು ವಿಶೇಷ ಸೆಷನ್ಸ್ ನಂತರ ತಮ್ಮ ಕುಟುಂಬ ಮತ್ತು ಸ್ನೇಹಿತರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


