ಬೆಂಗಳೂರು: 55 ವರ್ಷದ ಮಹಿಳೆ ಕಟ್ಟಿ ಹಾಕಿ ದರೋಡೆ, ರೌಡಿ ಶೀಟರ್ ಬಂಧನ
55 ವರ್ಷದ ಮಹಿಳೆಯೊಬ್ಬರನ್ನು ಮನೆಯಲ್ಲಿ ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಗೌರಮ್ಮ ಎಂದು ಗುರುತಿಸಲಾಗಿದೆ. ಆರ್‌ಆರ್ ನಗರದ ಪಟ್ಟಣಗೆರೆ ನಿವಾಸಿಯಾಗಿದ್ದು, ಮೊಮ್ಮಗನನ್ನು ಟ್ಯೂಷನ್ ಸೆಂಟರ್‌ನಲ್ಲಿ ಬಿಟ್ಟು ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಹಿಂಬಾಲಿಸಿದ್ದಾನೆ.

ಬೆಂಗಳೂರು: 55 ವರ್ಷದ ಮಹಿಳೆಯೊಬ್ಬರನ್ನು ಮನೆಯಲ್ಲಿ ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಗೌರಮ್ಮ ಎಂದು ಗುರುತಿಸಲಾಗಿದೆ. ಆರ್‌ಆರ್ ನಗರದ ಪಟ್ಟಣಗೆರೆ ನಿವಾಸಿಯಾಗಿದ್ದು, ಮೊಮ್ಮಗನನ್ನು ಟ್ಯೂಷನ್ ಸೆಂಟರ್‌ನಲ್ಲಿ ಬಿಟ್ಟು ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಹಿಂಬಾಲಿಸಿದ್ದಾನೆ.
ಗೌರಮ್ಮ ಮನೆಗೆ ಹಿಂತಿರುಗುತ್ತಿದ್ದಂತೆಯೇ ರೌಡಿ ಶೀಟರ್ ಆಗಿರುವ ಆರೋಪಿ ಕುಮಾರ್ ಅಲಿಯಾಸ್ ಲೊಡ್ಡೆ ಕುಮಾರ್ ಆಕೆಯನ್ನು ಮನೆಗೆ ಒಳಗಡೆ ತಳ್ಳಿದ್ದಾನೆ. ನಂತರ ಬಟ್ಟೆಯಿಂದ ಬಾಯಿ ಕಟ್ಟಿಹಾಕಿ ಮನೆ ದರೋಡೆ ಮಾಡಿದ್ದಾನೆ ಎಂದುಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. 120 ಗ್ರಾಂ ಚಿನ್ನಾಭರಣ ಹಾಗೂ 50 ಸಾವಿರ ನಗದು ಸೇರಿದಂತೆ ಒಟ್ಟು 3.2 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ. ಆರೋಪಿ ಮನೆಯನ್ನು ಹೊರಗಿನಿಂದ ಬೀಗ ಹಾಕಿಕೊಂಡು ಹೋಗಿದ್ದ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತೆ ಮನೆ ಒಳಗಿನಿಂದ ಬಾಗಿಲು ಬಡಿದ ನಂತರ ನೆರೆಹೊರೆಯವರು ಬಂದು ಬಾಗಿಲು ತೆಗೆದಿದ್ದಾರೆ. ಸಂತ್ರಸ್ತೆಯ ಕುಟುಂಬವು ವಸತಿ ಸಂಕೀರ್ಣದ ಮೊದಲ ಮಹಡಿಯಲ್ಲಿಯೇ ಇದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕಳವು ಮಾಡಿದ ವಸ್ತುವನ್ನು ವಶಪಡಿಸಿಕೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


