ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ
ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ಬೆಂಗಳೂರು: ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.
ರಾಷ್ಟ್ರ ರಾಜಧಾನಿ ನನದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಐತಿಹಾಸಿಕ ಕ್ಷಣವಾಗಿದ್ದು, ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ ಎದುರು ನೋಡುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾನೂ ಕಾತರದಿಂದ ಕಾಯುತ್ತಿದ್ದೇನೆ. ದೇವೇಗೌಡರಿಗೆ ಆಹ್ವಾನ ಬಂದಿದ್ದು, ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ನೀವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ನನ್ನ ಮೇಲೆ ಒತ್ತಡವಿದೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಉಭಯ ಪಕ್ಷಗಳ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


