ರಾಜ್ಯ

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿ ಪೊಲೀಸರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಹೆಸರು ಕೈಬಿಡಲಾಗಿದೆ.

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿ ಪೊಲೀಸರು
ದರ್ಶನ್
Published On :

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಹೆಸರು ಕೈಬಿಡಲಾಗಿದೆ.

ಆರ್.ಆರ್ ನಗರ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು. 

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ದರ್ಶನ್ ಹೆಸರು ಕೈಬಿಟ್ಟಿದ್ದು ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖಿಸಿದ್ದಾರೆ.

ನಡೆದಿದ್ದು ಏನು?
ಕಳೆದ ವರ್ಷ ಅಕ್ಟೋಬರ್ 28ರಂದು ದರ್ಶನ್ ಮನೆಯ ಮುಂದೆ ಈ ಘಟನೆ ನಡೆದಿದ್ದು, ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಮನೆಯ ನಾಯಿ ಕಚ್ಚಿತ್ತು. ಅಂದು ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್ ಐ ಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.