ರಾಜ್ಯದಲ್ಲಿಂದು ಹೊಸದಾಗಿ 105 ಕೊರೋನಾ ಪ್ರಕರಣ ದೃಢ, 77 ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 105 ಹೊಸ ಕೊರೋನಾ ಪ್ರಕರಣ ದೃಢಪಟ್ಟಿದೆ. 77 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 483 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 105 ಹೊಸ ಕೊರೋನಾ ಪ್ರಕರಣ ದೃಢಪಟ್ಟಿದೆ. 77 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 483 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ 26 ಪಾಸಿಟಿವ್ ಪ್ರಕರಣ ಕಂಡುಬಂದಿದ್ದು, 27 ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 229 ಆಗಿದೆ. ಉಳಿದಂತೆ ರಾಯಚೂರಿನಲ್ಲಿ 10, ಮೈಸೂರು 9, ಬೆಂಗಳೂರು ಗ್ರಾಮಾಂತರ, ಕೊಡಗು, ವಿಜಯನಗರ ಜಿಲ್ಲೆಯಲ್ಲಿ 7, ಚಿತ್ರದುರ್ಗ 6, ಬಳ್ಳಾರಿ 6, ಧಾರವಾಡ, ಕಲಬುರಗಿ 5, ತುಮಕೂರಿನಲ್ಲಿ 4 ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 6,133 ಪ್ರಕರಣಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 5,373 ಆರ್ ಟಿಪಿಸಿಆರ್ ಹಾಗೂ 760 RaT ಟೆಸ್ಟ್ ಮಾಡಲಾಗಿದೆಯ ಪಾಸಿಟಿವಿಟಿ ದರ ಶೇ. 1.71 ರಷ್ಟಿದ್ದು, ಮರಣ ಪ್ರಮಾಣ ದರ ಶೇ.0. 00 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


