ರಾಜ್ಯ

ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಹೋಟೆಲ್‌ನಲ್ಲಿ ದಲಿತರಿಗೆ ಊಟ ಕೊಡದ ಮಾಲೀಕ, ಬಂಧನ

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ, ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಹೋಟೆಲ್‌ನಲ್ಲಿ ದಲಿತರಿಗೆ ಊಟ ಕೊಡದ ಮಾಲೀಕ, ಬಂಧನ
ಗ್ರಾಮದಲ್ಲಿ ಶಾಂತಿ ಸಭೆ ನಡೆಸುತ್ತಿರುವ ಅಧಿಕಾರಿಗಳು.
Published On :

ಬಳ್ಳಾರಿ: ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ, ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೋಟೆಲ್‌ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಿಸಿದ್ದಾರೆ. ‘ಹೋಟೆಲ್‌ ಮುಚ್ಚುತ್ತೇನೆ. ಆದರೆ, ನಿಮಗೆ ಊಟ ಕೊಡುವುದಿಲ್ಲ’ ಎಂದು ಹೋಟೆಲ್‌ ಮಾಲೀಕರು ದಲಿತ ಯುವಕರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಆಕೆಯ ನಡೆಯನ್ನು ಖಂಡಿಸಿರುವ ಯುವಕರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಕರಣದ ಮಾಹಿತಿ ಪಡೆದ ಕುರುಗೋಡು ತಹಶೀಲ್ದಾರ್ ರಾಘವೇಂದ್ರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಈ ಘಟನೆ ಕೆಲ ತಿಂಗಳ ಹಿಂದೆ ಗ್ರಾಮದಲ್ಲಿ ನಡೆದಿದೆ. ಆದರೆ ಘಟನೆಯ ವಿಡಿಯೋ ಮಂಗಳವಾರ ವೈರಲ್ ಆಗಿದ್ದು, ಎಸ್‌ಸಿ ಸಮುದಾಯದವರು ಪ್ರತಿಭಟನೆ ನಡೆಸಿದ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ನಂತರ ಕುರುಗೋಡು ತಹಶೀಲ್ದಾರ್ ರಾಘವೇಂದ್ರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಹೋಟೆಲ್ ಮಾಲೀಕರಾಗಿರುವ ನಾಗವೇಣಿ ಮತ್ತು ವೀರಭದ್ರಪ್ಪ ವಿರುದ್ಧ ಪೊಲೀಸರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.