ರಾಜ್ಯದ ಅರಣ್ಯ, ಸರಕಾರಿ ಭೂಮಿಯಲ್ಲಿರುವ ಮರಗಳಿಗೆ ಜಿಯೋ ಟ್ಯಾಗ್ ಅಳವಡಿಕೆಗೆ ಗಡುವು ನೀಡಿದ ಸರ್ಕಾರ
ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು, ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಬೆಂಗಳೂರು: ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು, ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.
ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿ ಮೊದಲಾದ ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಮಾರಣ ಹೋಮ ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ತಿಳಿಸಿದ್ದಾರೆ.
ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


