ಚಿತ್ರದುರ್ಗ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು, ಇಬ್ಬರಿಗೆ ಗಾಯ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ.
ಮೃತ ಮಹಿಳೆಯನ್ನು ಲಕ್ಷ್ಮಮ್ಮ(38) ಎಂದು ಗುರುತಿಸಲಾಗಿದ್ದು, ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿವೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಮೇಶ್ ಎಂಬುವವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿದ್ದು, ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ.
ಸಿಲಿಂಡರ್ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


