ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಾರದಿದ್ದರೆ ಚೀನಾ, ಪಾಕ್ ಭಾರತದ ಗಡಿ ನುಗ್ಗಲಿದೆ: ಎಸ್.ಎ.ರಾಮದಾಸ್
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ಬಾರದಿದ್ದರೆ, ಚೀನಾ ಹಾಗೂ ಪಾಕಿಸ್ತಾನ ಭಾರತದ ಗಡಿ ನುಗ್ಗಲಿದೆ ಎಂದು ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಅವರು ಹೇಳಿದ್ದಾರೆ.

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ಬಾರದಿದ್ದರೆ, ಚೀನಾ ಹಾಗೂ ಪಾಕಿಸ್ತಾನ ಭಾರತದ ಗಡಿ ನುಗ್ಗಲಿದೆ ಎಂದು ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪುನರಾಯ್ಕೆಯಾದರೆ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯ. ಎನ್‌ಡಿಎಯನ್ನು ಮತ್ತೆ ಅಧಿಕಾರಕ್ಕೆ ತರದಿದ್ದರೆ ಚೀನಾ ಮತ್ತು ಪಾಕಿಸ್ತಾನಗಳು ನಮ್ಮ ಗಡಿಗೆ ನುಗ್ಗುತ್ತವೆ ಎಂದು ಹೇಳಿದರು.
ಇದೇ ವೇಳೆ ಪ್ರಧಾನಿ ಮೋದಿ ಅವರ ಕನಸಿನ ಕಾರ್ಯಕ್ರಮಗಳಾಗ ಪಿಎಂ ಸ್ವನಿಧಿ ಹಾಗೂ ಪಿಎಂ ವಿಶ್ವಕರ್ಮ ಯೋಜನೆಗಳ ಕುರಿತು ಮಾತನಾಡಿದ ಅವರು, ಯೋಜನೆಗಳು ರಾಜ್ಯದಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಹೇಳಿದರು.
ಯೋಜನೆಗೆ ರಾಜ್ಯವೊಂದರಲ್ಲೇ 21 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ, ದೇಶದಾದ್ಯಂತ 63 ಲಕ್ಷ ಜನರು ನೋಂದಾಯಿಸಿಕೊಂಡಿದ್ದಾರೆ, ಇದರಿಂದಾಗಿ ಪಟ್ಟಿಯಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದರು.
ಬಳಿಕ ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಬಲಿಸರು ಬಯಸಿದ್ದು ನಿಜ. ಆದರೆ, ನಾನು ಟಿಕೆಟ್ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಹಾಗೂ ಮಂಡ್ಯ ಕ್ಷೇತ್ರಗಳನ್ನು ಒಗ್ಗೂಡಿಸ ಕ್ಲಸ್ಟರ್ ಎಂದು ರಚಿಸಲಾಗಿದೆ. ಇದರ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ. ಅಲ್ಲಿ ಎನ್'ಡಿಎ ಅಭ್ಯರ್ಥಿಗಲನ್ನು ಗೆಲ್ಲಿಸಲು ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ಕೆಲಸ ಮಾಡುತ್ತೇನೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


