ಹಾವೇರಿ: ವಿವಾದಿತ ಜಾಗದಲ್ಲಿ ರಾಮನ ಫೋಟೋಗೆ ಪೂಜೆ; ಐವರನ್ನು ವಶಕ್ಕೆ ಪಡೆದ ಪೊಲೀಸರು
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ.

ಹಾವೇರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ.
ಹಾವೇರಿಯ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ವಿವಾದಿತ ಜಾಗದಲ್ಲಿ ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು ಈ ಸಂಬಂಧ ತಾಲೂಕು ಸಂಚಾಲಕ ಗಂಗಾಧರ್ ಶೆಟ್ಟರ್, ಸೋಮಶೇಖರ್ ಗೌರಿಮಠ, ಈರಣ್ಣ ಬಳೇಗಾರ, ಮೋಹನ್ ಮೀರಜಕರ್ ಸೇರಿ ಐವರನ್ನು ಬಂಕಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಳಿಕ ಶ್ರೀರಾಮನ ಭಾವಚಿತ್ರವನ್ನು ತೆಗೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಾವೇರಿ ಎಸ್ಪಿ ಹೇಳಿದರು. ಸದ್ಯ ಬಂಕಾಪುರ ಬೂದಿ ಮುಚ್ಚಿದ ಕೆಂಡದಂತಾಗಿದೆ.
ಹಿಂದೂಗಳು ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗದಲ್ಲಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತಿತ್ತು. ಆದರೆ ಈ ಜಾಗ ನಮ್ಮದು ಎಂದು ಮುಸ್ಲಿಂ ಸಮುದಾಯದವರು ತಕರಾರು ತೆಗೆದಿದ್ದರು. ಹಾಗಾಗಿ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗ ವಿವಾದಿತ ಜಾಗವಾಗಿದೆ. ಸದ್ಯ ಈ ಕುರಿತಾಗಿ ಕೋರ್ಟ್ನಲ್ಲಿ ಪ್ರಕರಣ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


