ಪಿಎಸ್ಐ ನೇಮಕಾತಿ ಅಕ್ರಮ: ನ್ಯಾ. ಬಿ.ವೀರಪ್ಪ ಸಮಿತಿ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.
ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.
ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


