ಬೆಂಗಳೂರು: ಮದ್ಯ ಸೇವಿಸಿ ಚಾಲನೆ; 16 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು
ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸರು ಬೆಳಿಗ್ಗೆ 7 ರಿಂದ 9.30ರ ನಡುವೆ 3,414 ಶಾಲಾ ವಾಹನ ಚಾಲಕರನ್ನು ಪರೀಕ್ಷಿಸಲಾಗಿದ್ದು ಈ ವೇಳೆ 16 ಶಾಲಾ ವಾಹನ ಚಾಲಕರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ.
ಕುಡುಕ ಚಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 ಮತ್ತು ಮೋಟಾರು ವಾಹನ ಕಾಯ್ದೆ185ರ (ಕುಡಿದು ವಾಹನ ಚಲಾವಣೆ) ಅಡಿಯಲ್ಲಿ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ತಿಳಿಸಿದ್ದಾರೆ.
ಸಂಬಂಧಪಟ್ಟ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆಯಾ ಆರ್‌ಟಿಒಗಳಿಗೆ ಕಳುಹಿಸಲಾಗಿದೆ ಎಂದು ಅನುಚೇತ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


