ಬೆಂಗಳೂರು: ಮಾಜಿ ಸಚಿವ ಎಲ್ ಜಿ ಹಾವನೂರು ಪುತ್ರ ಹಾಗೂ ಕಾನೂನು ಕಾಲೇಜು ಮಾಲೀಕ ಅಶೋಕ್ ಹಾವನೂರು ಆತ್ಮಹತ್ಯೆ!
ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರು: ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಮ್ಮ ಮನೆಯಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರು-ಬೆಂಗಳೂರು ಮುಖ್ಯರಸ್ತೆಯ ಹಾವನೂರು ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಮಧ್ಯಾಹ್ನದವರೆಗೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ, ಅವರ ಪತ್ನಿ ಮತ್ತು ಮಕ್ಕಳು ಹೋಗಿ ಪರಿಶೀಲಿಸಿದಾಗ ಒಳಗಿನಿಂದ ಬಾಗಿಲು ಹಾಕಿರುವುದು ಕಂಡು ಬಂದಿದೆ. ನಂತರ ಬಾಗಿಲು ಒಡೆದು ನೋಡಿದಾಗ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರಿಗೆ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ, ಡಿಜಿಟಲ್ ರೂಪದಲ್ಲಿ ಯಾವುದೇ ನೋಟು ಇದೆಯೇ ಎಂದು ಪರಿಶೀಲಿಸುತ್ತಿದ್ದಾರೆ.
ಈ ಸಂಬಂಧ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ಒಬ್ಬಂಟಿಯಾಗಿರುತ್ತಿದ್ದ ಅವರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಕಳೆದ ಹದಿನೈದು ದಿನಗಳಿಂದ ಮನೆಯಲ್ಲಿದ್ದರು ಮತ್ತು ಹೊರಗೆ ಎಲ್ಲಿಯೂ ಹೋಗುತ್ತಿರಲಿಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


