ಮಂಗಳೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!
ತೆಂಗಿನ ಮರದಿಂದ ಬಿದ್ದು, 58 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ತೆಂಗಿನ ಮರದಿಂದ ಬಿದ್ದು, 58 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಎಂದು ಗುರುತಿಸಲಾಗಿದೆ. ಮೃತರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ.
ಉಳ್ಳಾಲ ತಾಲೂಕಿನ ಸೋಮನಾಥ ಉಳಿಯ ಸಮೀಪದ ಮನೆಯೊಂದರ ಬಳಿ ತೆಂಗಿನ ಮರಕ್ಕೆ ಹತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


