ರಾಜ್ಯ

ತುಮಕೂರು: ಕ್ವಾರಿಯಲ್ಲಿ ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು

ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ...

ತುಮಕೂರು: ಕ್ವಾರಿಯಲ್ಲಿ ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
Published On :

ತುಮಕೂರು: ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಛತ್ತೀಸ್‌ಗಢದ  ಅಬ್ಬು ಮತ್ತು ಬಿಹಾರದ ಮನು ಎಂದು ಗುರುತಿಸಲಾಗಿದ್ದು,  ಇಬ್ಬರೂ 20ರ ಹರೆಯದವರು ಎಂದು ಪೊಲೀಸರು ಹೇಳಿದ್ದಾರೆ.

ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಬಂಡೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿ ಪ್ರಸ್ತುತ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೃತ ಕಾರ್ಮಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.