ಅಪಘಾತ ವಿಚಾರಕ್ಕೆ ವಾಗ್ವಾದ: ಬಾನೆಟ್ ಮೇಲಿದ್ದ ವ್ಯಕ್ತಿಯನ್ನು 400 ಮೀ. ದೂರಕ್ಕೆ ಎಳೆದೊಯ್ದು ಚಾಲಕ, ವಿಡಿಯೋ ವೈರಲ್!
ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ.
ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಕೊಂಡೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದೂ ಕೂಡ ಕಂಡು ಬಂದಿದೆ.
ಘಟನೆ ಸಂಬಂಧ ಕಾರು ಚಾಲಕ ಮಹಮ್ಮದ್ ಮುನೀರ್ ವಿರುದ್ಧ ಎನ್.ಸಿ.ಆರ್ ದಾಖಲು ಮಾಡಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.
‘ಮಲ್ಲೇಶ್ವರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ, ಅಶ್ವತ್ಥ್ ಅವರ ಕ್ಯಾಬ್ಗೆ ಮಹಮ್ಮದ್ ಮುನೀರ್ ಕಾರು ಡಿಕ್ಕಿ ಹೊಡೆದಿತ್ತು. ಈ ವೇಳೆ ಕಾರು ನಿಲ್ಲಿಸುವಂತೆ ಅಶ್ವತ್ಥ್ ತಿಳಿಸಿದ್ದಾರೆ. ಆದರೆ, ಮುನೀರ್ ವಾಹನ ನಿಲ್ಲಿಸದೆ ಮುಂದಕ್ಕೆ ತೆರಳಲು ಪ್ರಯತ್ನಿಸಿದ್ದರು. ಆಗ, ಅಶ್ವತ್ಥ್ ಅವರು ಕಾರಿನ ಬಾನೆಟ್ ಮೇಲೆ ಹತ್ತಿ ಕೆಳಕ್ಕೆ ಇಳಿಯುವಂತೆ ಮನವಿ ಮಾಡಿದ್ದರು. ಅದನ್ನು ಲೆಕ್ಕಿಸದೇ ಅಶ್ವತ್ಥ್ ಅವರನ್ನು ದೂರಕ್ಕೆ ಎಳೆದೊಯ್ದು ದುಷ್ಕೃತ್ಯ ಎಸಗಿದ್ದಾನೆ.
‘ಮಲ್ಲೇಶ್ವರದ 18ನೇ ಕ್ರಾಸ್‌ನ ಸಿಗ್ನಲ್ವರೆಗೂ ಆರೋಪಿ ತನ್ನ ಕಾರು ಚಲಾಯಿಸಿದ್ದು, ಸ್ಥಳೀಯರು ಹಿಂದೆ ಓಡಿದರೂ ಕಾರು ನಿಲ್ಲಿಸಿಲ್ಲ. ನಂತರ ಕಾರನ್ನು ನಿಯಂತ್ರಿಸಲು ಸಾಧ್ಯವಾಗದೆ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಅಶ್ವತ್ಥ್ ಅವರು ಕೆಳಗೆ ಬಿದ್ದಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ಅವರು, ಮಲ್ಲೇಶ್ವರಂ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಮಾರಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದೆ. ದೃಶ್ಯದಲ್ಲಿರುವ ವ್ಯಕ್ತಿಯನ್ನು ಗುರುತಿಸಲಾಗಿದ್ದು, ತನಿಖೆಯ ನಂತರ ಚಾಲಕನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


