ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಿಐಡಿಯಿಂದ ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಕೆ
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ತನಿಖೆಯನ್ನು ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ತನಿಖೆಯನ್ನು ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಡಿ.10ರ ಮಧ್ಯರಾತ್ರಿ ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯದಿಂದಷ್ಟೇ ಅಲ್ಲದೆ, ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆಯೂ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು.
ನಂತರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಕೆಲವೇ ದಿನಗಳಲ್ಲಿ 11 ಮಂದಿಯನ್ನು ಬಂಧನಕ್ಕೊಳಪಡಿಸಿತ್ತು. ಅಲ್ಲದೆ, ಒತ್ತಡಕ್ಕೆ ಮಣಿದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಇದರಂತೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಸಿಐಡಿ ಅಧಿಕಾರಿಗಳು, ಇದೀಗ ತನಿಖೆಯನ್ನು ಪೂರ್ಣಗೊಳಿಸಿದ್ದು, ಆರೋಪಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದೆ.
ತನಿಖೆ ವೇಳೆ ಸಿಐಡಿ ಅಧಿಕಾರಿಗಳು ಹಲವು ಮಂದಿ ಪ್ರಮುಖ ಸಾಕ್ಷಿಗಳು ಹಾಗೂ ಇತರರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಮಹಿಳೆಯ ಪುತ್ರ ಕೂಡ ಹೇಳಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


