ಒಂದೇ ಕ್ಷೇತ್ರದಿಂದ 8ನೇ ಬಾರಿಗೆ ಪರಿಷತ್‌ಗೆ ಆಯ್ಕೆ: ಬಸವರಾಜ ಹೊರಟ್ಟಿಗೆ ಲಿಮ್ಕಾ ದಾಖಲೆ ಗರಿ!
ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ಬೆಂಗಳೂರು: ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.
ಬಸವರಾಜ ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನ (MLC) ಸದಸ್ಯರಾಗಿದ್ದಾರೆ. ಭಾರತದ ರಾಜಕೀಯಕ್ಕೆ ಸಂಬಂಧಿಸಿದಂತೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯು ಪ್ರಕಟಿಸಿರುವ ಪುಸ್ತಕದಲ್ಲಿ ದೀರ್ಘಾವಧಿಗೆ ಚುನಾಯಿತ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿರುವ ಮೂವರು ರಾಜಕಾರಣಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ.
ಶಿಕ್ಷಕ ವೃತ್ತಿಯಿಂದ ರಾಜಕಾರಣಿಯಾಗಿ ಪರಿವರ್ತನೆಗೊಂಡ ಅವರು ಹಲವು ವರ್ಷಗಳಿಂದ ಜೆಡಿಎಸ್‌ನಲ್ಲಿದ್ದರು ಮತ್ತು ಮೇ 10 ರ ವಿಧಾನಸಭಾ ಚುನಾವಣೆಯ ಮೊದಲು ಬಿಜೆಪಿಗೆ ಸೇರಿದ್ದರು. ಆದರೆ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
ಹೊರಟ್ಟಿ ಅವರು 1980ರಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಬುಧವಾರದವರೆಗೆ 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸಿರುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.
ಇದನ್ನೂ ಓದಿ: ಪ್ರತ್ಯೇಕವಾಗಿ ಬದುಕುವಷ್ಟು ಸಂಪನ್ಮೂಲ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಇಲ್ಲ: ಬಸವರಾಜ ಹೊರಟ್ಟಿ;
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರು 11 ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದರು, ಆದರೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದರು. ಆದರೆ ಹೊರಟ್ಟಿಯವರು 1980ರಿಂದ ಇಲ್ಲಿಯವರೆಗಿನ ಎಲ್ಲಾ ಚುನಾವಣೆಗಳಲ್ಲಿ ಒಂದೇ ಕ್ಷೇತ್ರದಿಂದ ಗೆದ್ದಿರುವುದು ದಾಖಲೆಯಾಗಿದೆ.
ವರ್ಷ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರನ್ನು ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ಇಲಾಖೆಯ ಪ್ರಕಟಣೆ ತಿಳಿಸಿದೆ, ಅವರು 24 ವರ್ಷ ಮತ್ತು 165 ದಿನಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.
ಜ್ಯೋತಿ ಬಸು ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ 23 ವರ್ಷ 137 ದಿನಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


