ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿಯಾಗಿ ಪಿಎ ಮುರಳಿ ನೇಮಕ
ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

ಶೃಂಗೇರಿ: ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.
ಜ.25 ರಿಂದ ಜಾರಿಗೆ ಬರುವಂತೆ ಪಿ.ಎ ಮುರಳಿ ಅವರನ್ನು ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿಯನ್ನಾಗಿ ಜಗದ್ಗುರು ಭಾರತೀ ತೀರ್ಥ ಸ್ವಾಮಿಗಳು ನೇಮಕ ಮಾಡಿದ್ದಾರೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
1986 ರಲ್ಲಿ ಈ ಹಿಂದಿನ ಜಗದ್ಗುರುಗಳಾಗಿದ್ದ ಅಭಿನವ ವಿದ್ಯಾತೀರ್ಥ ಸ್ವಾಮಿಗಳು ನೇಮಕ ಮಾಡಿದ್ದ ಗೌರಿ ಶಂಕರ್ ಅವರು ಮಠದ ಹಾಲಿ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸುದೀರ್ಘ 35 ವರ್ಷಗಳ ಕಾಲ ಶ್ರೀಮಠದ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ಗೌರಿ ಶಂಕರ್ ಅವರಿಗೆ ಫೆಬ್ರವರಿ 12ರಂದು ಮಠದಲ್ಲಿ ಅಭಿನಂದನಾ ಸಮಾರಂಭವನ್ನು ಸಹ ಆಯೋಜಿಸಲಾಗಿದೆ. ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಸ್ವಾಮಿಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಗಳಿಗೆ ಮುಖ್ಯ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


