ರಾಜ್ಯ

ವಿಜಯಪುರ: ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ; ಮಹಿಳೆಯಿಂದ ದೂರು ದಾಖಲು

ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ: ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ; ಮಹಿಳೆಯಿಂದ ದೂರು ದಾಖಲು
ಸಾಂದರ್ಭಿಕ ಚಿತ್ರ
Published On :

ವಿಜಯಪುರ: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ನಗರದ ಗಾಂಧಿಚೌಕ ಪೊಲೀಸ್ ಠಾಣೆಯ ಪೊಲೀಸ್ ವಿನಾಯಕ ಟಕ್ಕಳಗಿ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಪ್ರಕಾರ ಬಸವನಬಾಗೇವಾಡಿಯ ಮಹಿಳೆಗೆ ಎಂಟು ತಿಂಗಳ ಹಿಂದೆ ಆರೋಪಿ ಪೊಲೀಸ್ ಪರಿಚಯವಾಗಿದ್ದು, ನಂತರ ಪರಸ್ಪರ ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ಅಲ್ಲದೇ ನಿಯಮಿತವಾಗಿ ಮೊಬೈಲ್‌ಗಳಲ್ಲಿ ಚಾಟ್ ಮತ್ತು ಕರೆ ಮಾಡಲು ಪ್ರಾರಂಭಿಸಿದ್ದು, ಇಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆ. ಆರೋಪಿಯು ಆಕೆಗೆ ಮದುವೆಯಾಗುವುದಾಗಿ ನಂಬಿಸಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳಸಿರುವುದಾಗಿ ಆರೋಪಿಸಲಾಗಿದೆ. 

ಆದರೆ, ಸ್ವಲ್ಪ ಸಮಯದ ನಂತರ ಆರೋಪಿ ಪೊಲೀಸ್ ಆಕೆಯನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದು, ಅಂತಿಮವಾಗಿ ಮದುವೆಯಾಗಲು ನಿರಾಕರಿಸಿದ್ದಾರೆ. ಇದರಿಂದಾಗಿ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ಚಾಟ್ ಸ್ಕ್ರೀನ್ ಶಾಟ್ ಗಳು ಮತ್ತು ಫೋಟೋಗಳನ್ನು ಪೊಲೀಸರಿಗೆ ನೀಡಿದ್ದಾರೆ. 

ದೂರು ದಾಖಲಾದ ನಂತರ ಆರೋಪಿ ಪೊಲೀಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅವರು ತನ್ನನ್ನು ಮದುವೆಯಾಗಬೇಕು ಅಥವಾ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಶಿಕ್ಷೆಯಾಗಬೇಕು ಎಂದು ಮಹಿಳೆ ಒತ್ತಾಯಿಸುತ್ತಿದ್ದಾರೆ.  ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.